
ಮೈಸೂರು: ಸರ್ಕಾರಿ ದಾಖಲೆಗಳನ್ನು ತಿದ್ದಿ ಅಕ್ರಮವೆಸಗಿದ ಪ್ರಕರಣ ಸಂಬಂಧ ನಗರಸಭೆ ಪೌರಾಯುಕ್ತ, ಕಂದಾಯ ಸಿಬ್ಬಂದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಸರ್ಕಾರಿ ದಾಖಲೆಗಳನ್ನು ತಿದ್ದಿ ಕೆಲವು ಕಡತಗಳನ್ನು ನಾಪತ್ತೆ ಮಾಡಿದ್ದರು. ನಿವೇಶನಗಳ ಖಾತೆ ಮಾಡುವ ವೇಳೆ ನಿಯಮಗಳನ್ನು ಉಲ್ಲಂಘನೆ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ದೂರಿನ ಮೇರೆಗೆ ಎಫ್ ಐ ಆರ್ ದಾಖಲಾಗಿದೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ನಗರಸಭೆ ಹಿಂದಿನ ಪೌರಾಯುಕ್ತ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ನಂಜನಗೂಡು ತಾಲೂಕಿನ ದೇಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದೇವೀರಮ್ಮನಹಳ್ಳಿಯಲ್ಲಿ ಸರ್ಕಾರಿ ಭೂ ದಾಖಲೆಗಳನ್ನು ತಿದ್ದುಪಡಿ ಮಾಡಿ ಅಕ್ರಮವೆಸಗಿದ್ದರು.