ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ಇಂದು ಮೈಸೂರು ಹಾಗೂ ಮಂಡ್ಯ ಬಂದ್ ಗೆ ಕರೆ ಕೊಟ್ಟಿದ್ದು, ಪ್ರತಿಭಟನೆ ತೀವ್ರಗೊಂಡಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಸದಸ್ಯರು ಪ್ರತಿಭಟನೆಗೆ ಬೆಂಬಲ ನೀಡಿದ್ದು, ಮೈಸೂರು ಗ್ರಾಮಾಂತರ ಬಸ್ ನಿಲ್ದಾಣ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಖಾಸಗಿ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಬಸ್ ನಿಲ್ದಾಣಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ರಸ್ತೆಯಲ್ಲಿಯೇ ಕುಳಿತು ಧರಣಿ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಬಸ್ ನಿಲ್ದಾಣದ ಮುಂಭಾಗ ಅಮಿತ್ ಶಾ ಪ್ರತಿಕೃತಿ ಮೆರವಣಿಗೆ ಮಾಡಿದರು. ಪೊಲೀಸರ ವಿರೋಧದ ನಡುವೆಯೂ ಅಮಿತ್ ಶಾ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಮಳಿಗೆಗಳಿಗೆ ತೆರಳಿ ಬಲವಂತದಿಂದ ಬಾಗಿಲು ಮುಚ್ಚಿಸಿದರು.
ಇನ್ನೊಂದೆಡೆ ಮಂಡ್ಯದಲ್ಲಿಯೂ ಬಂದ್ ಪ್ರತಿಭಟನೆ ಆರಂಭವಾಗಿದ್ದು, ಹಲವೆಡೆ ಪ್ರತಿಭಟನಾಕಾರರು ವಾಹನ ಸಂಚಾರಕ್ಕೆ ಅಡ್ದಿಪಡಿಸಿದ್ದಾರೆ. ಮಂಡ್ಯದಲ್ಲಿ ಬಂದ ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.