ಮೈಸೂರು: ಮೈಸೂರಿನ ಟಿ.ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ ಹಾಗೂ ಸಂದೇಶ್ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನುಮಜಯಂತಿ ದಿನ ಭಾನುವಾರ ರಾತ್ರಿ ಗುಂಪುಘರ್ಷಣೆ ನಡೆದು ದುಷ್ಕರ್ಮಿಗಳು ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಟಿ.ನರಸಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪೊಲೀಸರು 6 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದರು.
ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.ಟಿ. ನರಸೀಪುರ ಪಟ್ಟಣದಲ್ಲಿ ಹನುಮಜಯಂತಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಬಳಿಕ ಪಟ್ಟಣದ ಹೊರವಲಯದಲ್ಲಿ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಹತ್ಯೆ ಮಾಡಲಾಗಿದೆ.ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿದ್ದ ವೇಣುಗೋಪಾಲನನ್ನು ಪಟ್ಟಣದ ಹೊರವಲಯದಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಲಾಗಿದ್ದು, ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.