alex Certify ಮೈಸೂರು ಅರಮನೆಗೆ 2 ದಿನ ಪ್ರವಾಸಿಗರಿಗೆ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು ಅರಮನೆಗೆ 2 ದಿನ ಪ್ರವಾಸಿಗರಿಗೆ ನಿರ್ಬಂಧ

ಮೈಸೂರು: ಮೈಸೂರು ಅರಮನೆ ಭೇಟಿಗೆ ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಮೈಸೂರಿನಲ್ಲಿ ಆಗಸ್ಟ್ 1 ಮತ್ತು 2ರಂದು ಜಿ 20 ಶೃಂಗಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿದೇಶಿ ಗಣ್ಯರು ಅರಮನೆಗೆ ಭೇಟಿ ನೀಡಲಿದ್ದಾರೆ. ಮುಂಜಾಗೃತಾ ಕ್ರಮವಾಗಿ ಅರಮನೆಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಆಗಸ್ಟ್ 1ರ ಮಧ್ಯಾಹ್ನ 2:30ರಿಂದ ಮೈಸೂರು ಅರಮನೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ ಆಗಸ್ಟ್ 2ರಂದು ರಾತ್ರಿ 7ರಿಂದ 8 ಗಂಟೆಯವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮ ವೀಕ್ಷಣೆಗೂ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ ಎಂದು ಮೈಸೂರು ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ತಿಳಿಸಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...