ಮೈಸೂರು: ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಎಂ.ಜಿ.ರೋಡ್, ಬ್ರಿ.ಗೇಡ್ ರೋಡ್ ಗಳಲ್ಲಿ ಹೊಸ ವರ್ಷವನ್ನು ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ಆದರೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಬಾರಿ ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಮಾಜಿ ಪ್ರಧಾನಿ ಅಗಲಿಕೆಗೆ ಶೋಕಾಚರಣೆ ಹಿನ್ನೆಲೆಯಲ್ಲಿ ಈಬಾರಿ ಮೈಸೂರು ಅರಮನೆ ಬಳಿ ಹೊಸ ವರ್ಷಾಚರಣೆ ಕಾರ್ಯಕ್ರಮ ರದ್ದು ಮಾಡಲಾಗಿದೆ.
ಇಂದು ಹಾಗೂ ನಾಳೆ ಅರಮನೆ ವಿದ್ಯುತ್ ದೀಪಾಲಂಕಾರಕ್ಕೂ ಬ್ರೇಕ್ ಬಿದ್ದಿದೆ. ಈ ಬಗ್ಗೆ ಅರಮನೆ ಆಡಳಿಅ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಮಾಹಿತಿ ನೀಡಿದ್ದಾರೆ.