
ಮೈಸೂರು: ಮೈಸೂರು ರೈಲ್ವೆ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆಯೊಡ್ಡಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮೈಸೂರು ರೈಲು ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಸಂದೇಶ ರವಾನಿಸಿದ್ದು, ರೈಲು ನಿಲ್ದಾಣದಲ್ಲಿ ಪೊಲೀಸರು, ಅಧಿಕರಿಗಳು, ಬಾಂಬ್ ನಿಷ್ಕ್ರಿಯದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.
ರೈಲ್ವೆ ಪ್ಲಾಟ್ ಫಾರಂ, ರೈಲುಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು, ಪ್ರಯಾಣಿಕರು, ಲಗೇಜ್ ಗಳನ್ನು ತಪಾಸಣೆ ನಡೆಸಲಾಗಿದೆ.