![](https://kannadadunia.com/wp-content/uploads/2024/09/rave-party-mysore.jpg)
ಮೈಸೂರು: ಮೈಸೂರು ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ 64 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅನುಮತಿ ಇಲ್ಲದೇ ರೇವ್ ಪಾರ್ಟಿ ಆಯೋಜನೆ ಹಿನ್ನೆಲೆಯಲ್ಲಿ ಇಲವಾಲ ಪೊಲೀಸ್ ಠಾಣೆಯಲ್ಲಿ 64 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಐಪಿಸಿ ಸೆಕ್ಷನ್ 221, 223, 121(2), BNS1(a), 32, 34, 38(a) KE ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ರೇವ್ ಪಾರ್ಟಿಯಲ್ಲಿ ಭಗಿಯಾಗಿದ್ದ 64 ಜನರನ್ನು ಪೊಲೀಸರು ಬಂಧಿಸಿದ್ದು, ಬಂಧಿತರಲ್ಲಿ 8 ಜನ ಯುವತಿಯರಿದ್ದಾರೆ ಎಂದು ತಿಳಿದುಬಂದಿದೆ.
ಬಂಧಿತರು ಮೈಸೂರು, ಮಡಿಕೇರಿ, ಬೆಂಗಳೂರು, ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ.