ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಪ್ರಕರಣವನ್ನು ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಸಂಬಂಧ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದ್ದು, ತನಿಖೆಗೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ಆದೇಶಿಸಿದ್ದಾರೆ.
ಯೋಜನಾ ಆಯುಕ್ತಾಲಯದ ಆಯುಕ್ತ ವೆಂಕಟಾಚಲಪತಿ ನೇತೃತ್ವದಲ್ಲಿ ಹೆಚ್ಚುವರಿ ನಿರ್ದೇಶಕ ಶಶಿಕುಮಾರ್, ಜಂಟಿ ನಿರ್ದೇಶಕಿ ಶಾಂತಲಾ, ಉಪ ನಿರ್ದೇಶಕ ಪ್ರಕಾಶ್ ತನಿಖಾ ತಂಡದ ಸದಸ್ಯರನ್ನಾಗಿ ನೇಮಿಸಲಾಗಿದೆ. ಪ್ರಕರನದ ತನಿಖೆ ನಡೆಸಿ 15 ದಿನಗಳ ಒಳಗೆ ಸಮಗ್ರ ವರದಿ ನೀಡುವಂತೆ ಆದೇಶಿಸಲಾಗಿದೆ.