ಮೈಸೂರು: ಸಾಲಭಾದೆ ತಾಳಲಾರದೇ ಯುವಕನೊಬ್ಬ ಡೆತ್ ನೋಟ್ ಬೆರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯತೀಕ್ (25) ಮೃತ ಯುವಕ. ಕೆ.ಆರ್.ತಾಲೂಕಿನ ಹೆಬ್ಬಾಳು ಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಯತೀಕ್ ಕ್ರೆಡಿಟ್ ಕಾರ್ಡ್, ಪರ್ಸನಲ್ ಲೋನ್ ಪಡೆದಿದ್ದ. ಯುವಕ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಇಎಂಐ ಕಟ್ಟಲು ಸಾಧ್ಯವಾಗದೇ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿದ್ದಾರೆ.
ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.