alex Certify BIG NEWS: ಬಹಿರ್ದೆಸೆಗೆ ಹೋಗಿದ್ದಾತನ ಮೇಲೆ ಆನೆ ದಾಳಿ; ವ್ಯಕ್ತಿ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಹಿರ್ದೆಸೆಗೆ ಹೋಗಿದ್ದಾತನ ಮೇಲೆ ಆನೆ ದಾಳಿ; ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಳ್ಳಿಯಲ್ಲಿ ನಡೆದಿದೆ.

ವಸಂತ್ (36) ಆನೆ ದಾಳಿಗೆ ಸಾವನ್ನಪ್ಪಿದವರು. ವಸಂತ್ ಬಹಿರ್ದೆಸೆಗೆಂದು ಹೋಗಿದ್ದರು. ಈ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿ ತುಳಿದುಹಾಕಿದೆ. ವಸಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೈಸೂರು ಜಿಲ್ಲೆಯ ಹಲವೆಡೆಗಳಲ್ಲಿ ಆನೆ ಹಾಗೂ ಮಾನವ ಸಂಘರ್ಷ ಮುಂದುವರೆದಿದ್ದು, ಗ್ರಾಮಸ್ಥರು ಆತಂಕದಲ್ಲಿ ಬದುಕುವಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...