alex Certify BIG NEWS: ಅರಣ್ಯ ಇಲಾಖೆ ಬೋನಿಗೆ ಬಿದ್ದ ಮತ್ತೊಂದು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅರಣ್ಯ ಇಲಾಖೆ ಬೋನಿಗೆ ಬಿದ್ದ ಮತ್ತೊಂದು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು: ಮೈಸೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಚಿರತೆ, ಹುಲಿ ದಾಳಿಗಳು ಹೆಚ್ಚುತ್ತಿದ್ದು, ಗ್ರಾಮಸ್ಥರು ಜೀವ ಭಯದಲ್ಲಿ ಕಾಲ ಕಳೆಯುವಂತಾಗಿದೆ. ಇದೀಗ ಕೀರಾಳು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಬಿದ್ದಿರುವ ಘಟನೆ ನಡೆದಿದೆ.

ಹಲವು ದಿನಗಳಿಂದ ಗ್ರಾಮದ ಸುತ್ತ ಕಾಣಿಸಿಕೊಂಡಿದ್ದ ಚಿರತೆ, ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿತ್ತು. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಒತ್ತಾಯಿಸಿದ್ದರು.

ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಕೊನೆಗೂ ಚಿರತೆ ಬಿದ್ದಿದೆ. ಚಿರತೆ ಸೆರೆ ಹಿಡಿದಿರುವ ಹಿನ್ನೆಲೆಯಲ್ಲಿ ಕೀರಾಳು ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...