alex Certify ರಸ್ತೆ ದಾಟುತ್ತಿದ್ದಾಗ ಭೀಕರ ಅಪಘಾತ; KSRTC ಬಸ್ ಗೆ ಯುವಕ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ದಾಟುತ್ತಿದ್ದಾಗ ಭೀಕರ ಅಪಘಾತ; KSRTC ಬಸ್ ಗೆ ಯುವಕ ಬಲಿ

ಮೈಸೂರು: ರಸ್ತೆ ದಾಟುವಾಗ ಎಚ್ಚರ ವಹಿಸಿದಷ್ಟೂ ಕಡಿಮೆಯೇ. ಕ್ಷಣಾರ್ಧದಲ್ಲಿ ವೇಗವಾಗಿ ಬರುವ ವಾಹನಗಳಿಗೆ ಸಿಲುಕಿ ಜೀವ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಸ್ತೆ ದಾಟುತ್ತಿದ್ದ ಯುವಕನೊಬ್ಬ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ರಸ್ತೆ ದಾಟುತ್ತಿದ್ದಾಗಲೇ ವೇಗವಾಗಿ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಯುವಕ ಬಲಿಯಾಗಿದ್ದಾನೆ. ಮೈಸೂರು ಜಿಲ್ಲೆಯ ನಂಜನಗೂಡಿನ ಜೆ.ಎಸ್.ಎಸ್ ಪಾಲಿಟೆಕ್ನಿಕ್ ಕಾಲೇಜು ಬಳಿ ಈ ದುರಂತ ಸಂಭವಿಸಿದೆ.

ವಾಹನಗಳು ಬರುತ್ತಿಲ್ಲವೆಂದು ತಿಳಿದು ರಸ್ತೆ ದಾಟುತ್ತಿದ್ದ ಯುವಕನಿಗೆ ಕ್ಷಣಾರ್ಧದಲ್ಲಿ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಮುಬಾರಕ್ (28) ಮೃತ ದುರ್ದೈವಿ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...