ಮೈಸೂರು: ಕೆಲ ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದ್ದ ಚಿರತೆಯೊಂದು ಕೊನೆಗೂ ಸೆರೆ ಸಿಕ್ಕಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಮೂಡಲಬೀಡು ಗ್ರಾಮದಲ್ಲಿ ಹಲವು ದಿನಗಳಿಂದ ದನಕರುಗಳು, ಪ್ರಾಣಿಗಳ ಮೇಲೆ ದಾಳಿ ನಡೆಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಚಿರತೆ ಕಾಟದಿಂದ ಭಯಗೊಂಡಿದ್ದ ಗ್ರಾಮಸ್ಥರು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಮೂಡಲಬೀಡು ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಸೆರೆಗಾಗಿ ಬೋನುಗಳನ್ನು ಇಟ್ಟಿದ್ದರು. ಈಗ ಚಿರತೆ ಬೋನಿಗೆ ಬಿದ್ದಿದೆ.
ಚಿರತೆ ಸೆರೆ ಹಿಡಿದ ಬಳಿಕ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.