ಮೈಸೂರು: ಪಿಎಸ್ಐ ಪುತ್ರನ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧರೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ.
ಸೈಯ್ಯದ್ ಐಮಾನ್ ಬಂಧಿತ ಆರೋಪಿ. ಪಿಎಸ್ಐ ಓರ್ವರ ಮಗನಾಗಿರುವ ಆರೋಪಿ ಸೈಯದ್ ಐಮಾನ್, ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ.
ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಸೈಯ್ಯದ್ ಐಮಾನ್ ಹುಚ್ಚಾಟಕ್ಕೆ ಗುರುಸ್ವಾಮಿ ಎಂಬ ವೃದ್ಧರೊಬ್ಬರು ಬಲಿಯಾಗಿದ್ದರು. ಮೃತ ಗುರುಸ್ವಾಮಿ ಪುತ್ರ ಮಹದೇವಸ್ವಾಮಿ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿ ಸೈಯ್ಯದ್ ಐಮಾನ್ ವಿರುದ್ಧ ಎಫ್ ಐಆರ್ ದಾಖಲಿಸಿದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.