
ಮೈಸೂರು: ಪೊಲೀಸರ ವಿರುದ್ಧ ಕಿರುಕುಳ ಆರೊಪ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ.
ಕಿರಣ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿದ ಯುವಕ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಇದನ್ನು ಗಮನಿಸಿದ ಅಕ್ಕ-ಪಕ್ಕದ ಮನೆಯವರು ಯುವಕನನ್ನು ರಕ್ಷಿಸಿ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗ್ರಾಮದಲ್ಲಿ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರಂತೆ. ಇದೇ ವಿಚಾರವಾಗಿ ಯುವಕ ಪೊಲೀಸರು ಹಿಂಸೆ, ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ತಿಳಿಸಿದ್ದಾನೆ.