ಮೈಸೂರು: ಮೈಸೂರಿನಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಪಿರಿಯಾಪಟ್ಟಣದ ಚೌಡೇನಹಳ್ಳಿಯ ಬಿಎಂ ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಪಿರಿಯಾಪಟ್ಟಣದ ಕೋಗಿಲು ಗ್ರಾಮದ ಶಿವಾನಂದ ಮೃತಪಟ್ಟವರು ಎಂದು ಹೇಳಲಾಗಿದೆ. ಜೊತೆಯಲ್ಲಿದ್ದ ಅಂಬರೀಶ್ ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿರುವ ಮತ್ತೊಂದು ಬೈಕ್ ನಲ್ಲಿದ್ದ ಸವಾರನ ಗುರುತು ಪತ್ತೆಯಾಗಿಲ್ಲ. ಪಿರಿಯಾಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.