ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ನಾಲೆಗೆ ಪಲ್ಟಿಯಾಗಿ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಮೈಸೂರಿನ ಕೆಆರ್ ನಗರದ ಚುಂಚನಕಟ್ಟೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಮದುವೆಗೆ ಟಾಟಾ ಎಸ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಪುಷ್ಪಲತಾ(10), ಪಲ್ಲವಿ(9) ಮೃತಪಟ್ಟವರೆಂದು ಗುರುತಿಸಲಾಗಿದೆ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.