ಮೈಸೂರು: ಮೈಸೂರಿನ ಬ್ಯೂಟಿ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕೃಷ್ಣರಾಜ ಪೊಲೀಸರು ದಾಳಿ ನಡೆಸಿದ್ದು, 5 ಯುವತಿಯರನ್ನು ರಕ್ಷಿಸಿದ್ದಾರೆ.
ಬ್ಯೂಟಿ ಪಾರ್ಲರ್ ಗಳಲ್ಲಿ ಆನ್ಲೈತಿಕ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಒಡನಾಡಿ ಸಂಸ್ಥೆಗೆ ಮಾಹಿತಿ ಬಂದಿದ್ದು, ಸಂಸ್ಥೆಯಿಂದ ಈ ಬಗ್ಗೆ ಸಂದೇಶ ಮತ್ತು ವಿಡಿಯೋ ದಾಖಲೆಗಳನ್ನು ಸಂಗ್ರಹಿಸಿ ಕೃಷ್ಣರಾಜ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿದ್ದು, ಸ್ಥಳದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಪುರಾವೆಗಳು ದೊರೆತಿವೆ. ಐವರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ರಾಹುಲ್ ವಿಜಯ್, ದೀಪು, ಸ್ವಾಮಿ, ಗುರುಪ್ರಸಾದ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.