alex Certify BIG NEWS: ಸಿಎಂ ಮನೆ ಮೇಲೆ ಕಲ್ಲೆಸೆದ ಪ್ರಕರಣ ಬಗ್ಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಮನೆ ಮೇಲೆ ಕಲ್ಲೆಸೆದ ಪ್ರಕರಣ ಬಗ್ಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಮಾಹಿತಿ

ಮೈಸೂರು: ಮೈಸೂರಿನಲ್ಲಿ ಸಿಎಂ ಮನೆ ಮೇಲೆ ಕಲ್ಲು ಎಸೆದವ ಮಾನಸಿಕ ಅಸ್ವಸ್ಥನಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ.

ಆತ ಮಾನಸಿಕ ಅಸ್ವಸ್ಥ ಎಂಬುದಕ್ಕೆ ಯಾವುದೇ ಅಧಿಕೃತ ದಾಖಲೆ ಇಲ್ಲ. ಹೀಗಾಗಿ ಕಲ್ಲು ಎಸೆದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ದ್ವಿಚಕ್ರ ವಾಹನದಲ್ಲಿ ಬಂದು ಮುಖ್ಯಮಂತ್ರಿಗಳ ಮನೆ ಮೇಲೆ ಕಲ್ಲು ಎಸೆದಿದ್ದು, ತಡೆಯಲು ಮುಂದಾದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ. ನಂತರ ಆತನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಮನೆ ಮೇಲೆ ಕಲ್ಲೆಸೆಯಲು ಯಾರಾದರೂ ಹೇಳಿಕೊಟ್ಟಿದ್ದಾರಾ? ಕಲ್ಲು ತೋರಿದವನ ಹಿನ್ನೆಲೆ ಏನು ಎಂಬುದರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ರಮೇಶ್ ಬಾನೋತ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...