ಮೈಸೂರು: ಮೈಸೂರು ದಸರಾ ಜಂಬೂ ಸವಾರಿ ವೀಕ್ಷಣೆಗೆ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭಾನುವಾರ ಬೆಳಗ್ಗೆ 10 ಗಂಟೆಗೆ ಮತ್ತೆ ದಸರಾ ಗೋಲ್ಡ್ ಕಾರ್ಡ್, ಟಿಕೆಟ್ ಗಳನ್ನು ಆನ್ಲೈನ್ ಮೂಲಕ ಖರೀದಿಸಲು ಅವಕಾಶ ಕಲ್ಪಿಸಿದೆ.
mysoredasara.gov.in ವೆಬ್ಸೈಟ್ ಮೂಲಕ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಖರೀದಿಸಬಹುದು. ಗೋಲ್ಡ್ ಕಾರ್ಡ್ ಗೆ 6 ಸಾವಿರ ರೂಪಾಯಿ, ಟಿಕೆಟ್ 3000 ರೂ., 2,000 ರೂ., ಬನ್ನಿಮಂಟಪದಲ್ಲಿ ಪಂಜಿನ ಕವಾಯಿತು ವೀಕ್ಷಣೆಗೆ 500 ರೂ. ನಿಗದಿಪಡಿಸಲಾಗಿದೆ.
ಅಕ್ಟೋಬರ್ 18ರಂದು ಬೆಳಗ್ಗೆ ಆನ್ಲೈನ್ ನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಯೊಳಗೆ ಎಲ್ಲಾ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಮಾರಾಟವಾಗಿದ್ದವು. ದಸರಾ ವೀಕ್ಷಿಸಲು ಬರುವ ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಜಿಲ್ಲಾಡಳಿತ ಗೋಲ್ಡ್ ಕಾರ್ಡ್ ಸೌಲಭ್ಯ ಕಲ್ಪಿಸಿದೆ.
ಭಾನುವಾರ ಬೆಳಗ್ಗೆ 10 ಗಂಟೆಗೆ ಮತ್ತೆ ದಸರಾ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಗಳನ್ನು ಆನ್ಲೈನ್ ಮೂಲಕ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.