ಮೈಸೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆ ವೈಭವೂ ಅಲ್ಲದ ಸಾಧಾರಣವೂ ಅಲ್ಲದ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಸರಾಗೆ 18 ಕೋಟಿ ರೂ. ಅನುದಾನ ನೀಡಿದೆ. ಅಗತ್ಯವಿದ್ದರೆ ಹೆಚ್ಚಿನ ಅನುದಾನ ಮಂಜೂರು ಮಾಡಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ನವರಾತ್ರಿಯ ದಿನದಂದು ಅರಮನೆ ವೇದಿಕೆ ಸೇರಿದಂತೆ ಎಲ್ಲೆಡೆ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಇರುವ ದಸರಾ ವೆಬ್ಸೈಟ್ ಅನ್ನು ಹೆಚ್.ಸಿ. ಮಹದೇವಪ್ಪ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಲೋಕಾರ್ಪಣೆ ಮಾಡಿದ್ದಾರೆ.