ಮೈಸೂರು: ಪುಷ್ಪಾರ್ಚನೆ ಮಾಡುವುದರೊಂದಿಗೆ ಜಂಬೂ ಸವಾರಿ ಮೆರವಣಿಗೆ ಆರಂಭವಾಗಿದೆ. ಅರಮನೆ ಒಳಾಂಗಣದಲ್ಲಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯದವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಚಿವರಾದ ಎಸ್.ಟಿ. ಸೋಮಶೇಖರ್, ಸುನಿಲ್ ಕುಮಾರ್, ಮೈಸೂರು ಪಾಲಿಕೆ ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಬಗಾದಿ ಗೌತಮ್, ಪೋಲಿಸ್ ಆಯುಕ್ತ ಚಂದ್ರಗುಪ್ತ ಉಪಸ್ಥಿತರಿದ್ದರು.
ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆ ಆರಂಭವಾಗಿದೆ. ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ವಿರಾಜಮಾನರಾಗಿರುವ ದೃಶ್ಯವನ್ನು ಲಕ್ಷಾಂತರ ಸಂಖ್ಯೆಯ ಜನ ಕಣ್ತುಂಬಿಕೊಂಡಿದ್ದಾರೆ.
750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ಮೂರನೇ ಬಾರಿಗೆ ಅಂಬಾರಿ ಹೊತ್ತು ಸಾಗುತ್ತಿದೆ. ಅರಮನೆಯಿಂದ ಬನ್ನಿಮಂಟಪದವರೆಗೂ ಜಂಬೂಸವಾರಿ ಮೆರವಣಿಗೆ ಸಾಗಲಿದೆ. ಅರಮನೆಯಿಂದ ಕೆಆರ್ ಸರ್ಕಲ್, ಸೈಯಾಜಿ ರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಆರ್.ಎಂ.ಸಿ., ತಿಲಕ್ ನಗರ ರಸ್ತೆಯ ಮೂಲಕ ಬನ್ನಿಮಂಟಪ ತಲುಪಲಿದೆ.