alex Certify ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನವರಾತ್ರಿ ಆಚರಣೆ ವೇಳಾಪಟ್ಟಿ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನವರಾತ್ರಿ ಆಚರಣೆ ವೇಳಾಪಟ್ಟಿ ಬಿಡುಗಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ನವರಾತ್ರಿ ಆಚರಣೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.

ಅಕ್ಟೋಬರ್ 15ರಂದು ಭಾನುವಾರ ಶರನ್ನವರಾತ್ರಿ ಉತ್ಸವ ಆರಂಭವಾಗಲಿದೆ. ಚಾಮುಂಡಿ ಬೆಟ್ಟದಲ್ಲಿ ನಾಡ ದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಬೆಳಗಿನ 10:15 ರಿಂದ 10:36ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಲನೆ ನೀಡಲಾಗುವುದು. ಸಂಗೀತ ನಿರ್ದೇಶಕ ಹಂಸಲೇಖ ದಸರಾ ಉದ್ಘಾಟಿಸಲಿದ್ದಾರೆ.

ನಾಡಹಬ್ಬ ಮೈಸೂರು ದಸರಾ ಹಬ್ಬದ ಅರಮನೆ ಪೂಜೆಗಳು ಆಗಸ್ಟ್ 15ರ ಸಂಜೆ 6.30ರಿಂದ ಶುಭ ಮೇಷ ಲಗ್ನದಲ್ಲಿ ಪೂಜೆ ಆರಂಭಿಸಲಾಗುವುದು.

ಅಕ್ಟೋಬರ್ 20ರಂದು ಶುಕ್ರವಾರ ಕಾತ್ಯಾಯನಿ -ಸರಸ್ವತಿ ಪೂಜೆ ನಡೆಯಲಿದೆ.

ಅಕ್ಟೋಬರ್ 21ರಂದು ಶನಿವಾರ ಕಾಳರಾತ್ರಿ -ಮಹಿಶಾಸುರ ಸಂಹಾರ

ಅಕ್ಟೋಬರ್ 23 ರಂದು ಸೋಮವಾರ ಆಯುಧ ಪೂಜೆ

ಅಕ್ಟೋಬರ್ 24ರಂದು ಮಂಗಳವಾರ ವಿಜಯದಶಮಿ ನಡೆಯಲಿದೆ. ಅ. 24ರಂದು ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವರು. ಅಂದು ಮಧ್ಯಾಹ್ನ 1:46 ರಿಂದ ಮಕರ ಲಗ್ನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಗಣ್ಯಾತಿಗಣ್ಯರು ಸಂಜೆ 4:40 ರಿಂದ 5 ಗಂಟೆಯೊಳಗೆ ಶುಭ ಮೀನ ಲಗ್ನದಲ್ಲಿ ಪುಷ್ಪಾರ್ಚನೆ ನೆರವೇರಿಸುವರು. ಬಳಿಕ ನಾಡ ಹಬ್ಬ ಮೈಸೂರು ದಸರಾ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆ ಆರಂಭವಾಗಲಿದೆ.

ಅಕ್ಟೋಬರ್ 26ರಂದು ಭಾನುವಾರ ಬೆಟ್ಟದ ಚಾಮುಂಡೇಶ್ವರಿ ರಥೋತ್ಸವ ನಡೆಯಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...