alex Certify Mysuru Dasara :ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನಲೆಯೇನು? `ಜಂಬೂಸವಾರಿಯ ಇತಿಹಾಸದ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Mysuru Dasara :ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನಲೆಯೇನು? `ಜಂಬೂಸವಾರಿಯ ಇತಿಹಾಸದ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ

ಮೈಸೂರು : ಮೈಸೂರಿನಲ್ಲಿ ನಾಡಹಬ್ಬ ದಸರಾ ಕಳೆಗಟ್ಟಿದ್ದು, ಇಂದು ಸಂಜೆ 4.40 ಕ್ಕೆ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.   ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ಸತತ ನಾಲ್ಕನೇ ಬಾರಿಗೆ ಹೆಜ್ಜೆ ಹಾಕಲಿದ್ದಾನೆ.

ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ 4.30-4.46 ರ ಶುಭ ಮೀನ ಲಗ್ನದಲ್ಲಿ ಕೋಟಿ ಆಂಜನೇಯ ದೇಗುಲದ ಬಳಿ ಪೂಜೆ ಸಲ್ಲಿಸದ್ದಲಿದ್ದಾರೆ. ಬಳಿಕ ವಿಶ್ವವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.

ಅರಮನೆಯ ಬಲರಾಮ ದ್ವಾರದಲ್ಲಿ ಇಂದು ಮಧ್ಯಾಹ್ನ 1.46 ರಿಂದ 2.08 ರೊಳಗೆ ನಂದಿಧ್ವಜ ಪೂಜೆ ನೆರವೇರಲಿದೆ. ಸಂಜೆ 4.40 ರಿಂದ 5 ರವರೆಗೆ ಅಂಬಾವಿಲಾಸ ಅರಮನೆಯ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.  ಪೊಲೀಸರು ಜಂಬೂಸವಾರಿ ಮೆರವಣಿಗೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ .  ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ 6 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಈ ಬಾರಿ ಜಂಬೂ ಸವಾರಿಯಲ್ಲಿ ಕಣ್ಮನ ಸೆಳೆಯುವ 40 ಕ್ಕೂ ಹೆಚ್ಚು ಸ್ತಬ್ಧ ಚಿತ್ರಗಳು ಸಾಗಲಿವೆ.

ವಿಶ್ವವಿಖ್ಯಾತ ಜಂಬೂಸವಾರಿಯ ಇತಿಹಾಸ

ನಾಡಹಬ್ಬ ಮೈಸೂರು ದಸರಾ (Mysore dasara) ವಿಶ್ವ ವಿಖ್ಯಾತಿಯನ್ನು ಪಡೆದುಕೊಂಡಿದೆ. ಪ್ರತಿ ನವರಾತ್ರಿ (Navratri Festival) ಹಾಗೂ ವಿಜಯದಶಮಿಯ (Vijayadashami Festival) ಅಷ್ಟೂ ದಿನ ಮೈಸೂರು (Mysore City) ಝಗಮಗಿಸಲಿದೆ. ದಸರೆಯ ಇತಿಹಾಸವನ್ನು ನೋಡುವುದಾದರೆ 1610ರಲ್ಲಿ ಆರಂಭ ಮಾಡಲಾಯಿತು. ಶ್ರೀರಂಗಪಟ್ಟಣದ ಕಾವೇರಿ ನದಿಯ ಉತ್ತರ ದಿಕ್ಕಿನ ಗೌರಿಕಡುವೆಯಲ್ಲಿ ಎಂಬಲ್ಲಿ ದಸರಾಕ್ಕೆ ಚಾಲನೆ ನೀಡಲಾಗಿತ್ತು. ಅಂಬಾರಿ ಹೊರುವ ಪದ್ಧತಿಗೆ ಚಾಲನೆ ಸಿಕ್ಕಿದ್ದೂ ಸಹ ಆಗಿನಿಂದಲೇ ಆಗಿದೆ.

ಮೈಸೂರನ್ನು ಮಹಿಷಾಸುರನಿಂದ ರಕ್ಷಿಸಿ, ಆತನನ್ನು ಸಂಹಾರ ಮಾಡಿದ ದಿನವನ್ನು ವಿಜಯದಶಮಿ ಎಂದು ಆಚರಿಸುತ್ತಾ ಬರಲಾಗಿದ್ದು, ಅಂದು ಜಂಬೂ ಸವಾರಿ ಮೂಲಕ ಆನೆ ಮೇಲೆ 750 ಕೆಜಿ ತೂಕದ ಸ್ವರ್ಣಖಚಿತ ಅಂಬಾರಿಯಲ್ಲಿ ದೇವಿಯ ಪ್ರತಿಮೆಯನ್ನು ಇಟ್ಟು ಅರಮನೆಯಿಂದ ಬನ್ನಿ ಮಂಟಪದವರೆಗೆ ರಾಜ ಬೀದಿಯಲ್ಲಿ ಮೆರವಣಿಗೆ ನಡೆಸಲಾಗುವುದು.

ವಿಜಯನಗರ ಸಾಮ್ರಾಜ್ಯದ ಅರಸ ಶ್ರೀಕೃಷ್ಣ ದೇವರಾಯನ ಕಾಲದಲ್ಲಿ ವಿಜಯದಶಮಿಯನ್ನು ಪ್ರಾರಂಭಿಸಲಾಯಿತು. ಈ ವೇಳೆ ಶೌರ್ಯ – ಪರಾಕ್ರಮಗಳ ಪ್ರದರ್ಶನ, ಕಲೆ – ಸಾಹಿತ್ಯಗಳಿಗೆ ವೇದಿಕೆ, ಸಂಗೀತ – ನೃತ್ಯ ಮತ್ತು ಸಂಸ್ಕೃತಿ ಪ್ರದರ್ಶನಕ್ಕೆ ಅವಕಾಶ ಸೇರಿದಂತೆ ಹತ್ತು ದಿನಗಳ ಕಾಲ ಅದ್ಧೂರಿಯಾಗಿ ಆಚರಣೆ ನಡೆಸುತ್ತಾ ಬರಲಾಗಿತ್ತು. ಅವರ ತರುವಾಯ ಮೈಸೂರಿನಲ್ಲಿ ರಾಜಾ ಒಡೆಯರ್‌ ಅವರು ದಸರಾವನ್ನು ಶ್ರೀರಂಗಪಟ್ಟಣದಲ್ಲಿ ಆರಂಭಿಸಿದರು. ಮುಮ್ಮಡಿ ಕೃಷ್ಣರಾಜ ಒಡೆಯರ್‌ ಕಾಲದಲ್ಲಿ ಅಂದರೆ 1799ರಲ್ಲಿ ಒಡೆಯರು ತಮ್ಮ ಕೇಂದ್ರ ಸ್ಥಾನವನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗಾಯಿಸಿಕೊಂಡರು. ನಂತರದ ದಸರಾ ಆಚರಣೆಗಳು ಮೈಸೂರಿನಲ್ಲಿ ಪ್ರಾರಂಭವಾದವು.

ಜಂಬೂ ಸವಾರಿ ಆರಂಭಕ್ಕೆ ಮುನ್ನ ಶುಭ ಕುಂಭ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮೊದಲು ಪೂಜೆ ಸಲ್ಲಿಸಲಾಗುತ್ತದೆ. ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಆಸೀನಳಾಗಿರುವ ತಾಯಿ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ. ಆ ಬಳಿಕ 24 ಕುಶಾಲ ತೋಪುಗಳ ಗೌರವವನ್ನು ಸಮರ್ಪಣೆ ಮಾಡಲಾಗುತ್ತದೆ. ಅಲ್ಲಿಂದ ಅರಮನೆ ಆವರಣದಲ್ಲಿ ವಿಜಯದಶಮಿಯ ಅತ್ಯಾಕರ್ಷಕ ಮೆರವಣಿಗೆಗೆ ಚಾಲನೆ ದೊರೆಯುತದೆ. ಜಂಬೂಸವಾರಿಯು ಅರಮನೆ ಆವರಣದಿಂದ ಬನ್ನಿ ಮಂಟಪದವರೆಗೆ ನಡೆಯುತ್ತದೆ.

ಅಂಬಾರಿ ಹೊತ್ತ ಆನೆ ಜತೆಗೆ ಪೊಲೀಸ್ ಬ್ಯಾಂಡ್‌ನ ಆಕರ್ಷಕ ತಾಳ ವಾದ್ಯ ಕಳೆಗಟ್ಟಲಿದೆ. ಅಲ್ಲದೆ, ಕಂಸಾಳೆ ಕುಣಿತ, ಕಲಾತಂಡಗಳ ನೃತ್ಯ ಪ್ರದರ್ಶನಗಳ ಜತೆಗೆ ಸ್ತಬ್ಧ ಚಿತ್ರಗಳು ಎಲ್ಲರ ಗಮನ ಸೆಳೆಯುತ್ತದೆ. ಇದರ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿರುತ್ತಾರೆ.[

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...