ಮೈಸೂರು: ಒಂದು ವಾರದಿಂದ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಲಾಕ್ಡೌನ್ ಮತ್ತಷ್ಟು ಸಡಿಲಿಕೆ ಮಾಡಲಾಗಿದೆ.
ಶೇಕಡ 50 ರಷ್ಟು ಕಾರ್ಮಿಕರೊಂದಿಗೆ ಕಾರ್ಖಾನೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಗಾರ್ಮೆಂಟ್ಸ್ 30 ರಷ್ಟು ಸಿಬ್ಬಂದಿಯೊಂದಿಗೆ. ಕಾರ್ಯನಿರ್ವಹಿಸಬಹುದು. ಸರ್ಕಾರಿ ಕಚೇರಿಗಳಲ್ಲಿ ಶೇಕಡ 50 ರಷ್ಟು ಸಿಬ್ಬಂದಿಗೆ ಅವಕಾಶವಿದ್ದು, ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತು ಖರೀದಿ, ಬೀದಿ ವ್ಯಾಪಾರಿಗಳಿಗೆ ಅವಕಾಶ ನೀಡಲಾಗಿದೆ.
ಮಧ್ಯಾಹ್ನ 2 ಗಂಟೆಯವರೆಗೆ ಮದ್ಯ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ಇದೆ. ಮದುವೆ ಕಾರ್ಯದಲ್ಲಿ 40 ಮಂದಿ ಭಾಗವಹಿಸಬಹುದು. ತಹಶೀಲ್ದಾರ್ ಅನುಮತಿಯೊಂದಿಗೆ ಪಾಸ್ ನೀಡಲಿದ್ದಾರೆ. ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದ್ದಾರೆ.