ಮೈಸೂರು: ಮೈಸೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವೈದ್ಯೆಯೊಬ್ಬರು ಮೃತಪಟ್ಟಿದ್ದಾರೆ. ಖ್ಯಾತ ಪ್ರಸೂತಿ ತಜ್ಞರಾದ ಡಾ. ಜಿ.ಎಸ್. ವಿದ್ಯಾಧರೆ ಮೃತಪಟ್ಟವರು ಎಂದು ಹೇಳಲಾಗಿದೆ.
ಡೆನ್ಮಾರ್ ಅಪಾರ್ಟ್ಮೆಂಟ್ ನ ಮನೆಯಲ್ಲಿ ವೈದ್ಯೆ ವಿದ್ಯಾಧರೆ ಅವರ ಶವ ಪತ್ತೆಯಾಗಿದೆ. ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಆರ್ಟಿಓ ವೃತ್ತದ ಸಮೀಪ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿ ವೈದ್ಯ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.