ಮೈಸೂರು : ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರಿನ ಚಾಮುಂಡಿಪುರಂ ಬಾಡಿಗೆ ಮನೆಯಲ್ಲಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ದೇಹ ಕೊಳೆತ ವಾಸನೆ ಬರುತ್ತಿದ್ದಂತೆ ನೆರೆಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದಾಗ ನಾಲ್ವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಚಾಮುಂಡಿಪುರಂ ನಿವಾಸಿಗಳಾದ ಮಹಾದೇವಸ್ವಾಮಿ (48), ಪತ್ನಿ ಅನಿತಾ (38), ಪುತ್ರಿಯರಾದ ಚಂದ್ರಕಲಾ (17) ಹಾಗೂ ಧನಲಕ್ಷ್ಮೀ (15) ಮೃತಪಟ್ಟಿದ್ದಾರೆ. ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಅಥವಾ ಕೊಲೆಯಾಗಿದ್ದಾರಾ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.