ಮೈಸೂರು: ಷೇರು ಮಾರುಕಟ್ಟೆಗೆ ಸಂಬಂಧಿಸಿದ ನಕಲಿ ಕಂಪನಿಯೊಂದರಲ್ಲಿ ಹಣ ಹೂಡಿಕೆ ಮಾಡಿದ್ದ ಮೈಸೂರಿನ ಉದ್ಯಮಿಯೊಬ್ಬರು 2.96 ಕೋಟಿ ರೂ. ಕಳೆದುಕೊಂಡಿದ್ದಾರೆ. ಈ ಕುರಿತಾಗಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಸರಸ್ವತಿಪುರಂ ನಿವಾಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಬಗ್ಗೆ ಆಸಕ್ತಿ ವಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಂಡ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡಿದ್ದು, ಅದರಲ್ಲಿ ನೀಡಿದ ಮಾಹಿತಿಯಂತೆ ಏಪ್ರಿಲ್ ನಿಂದ ಹಂತ ಹಂತವಾಗಿ ಒಟ್ಟು 2.96 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಲಾಭದ ನಿರೀಕ್ಷೆಯಲ್ಲಿದ್ದ ಅವರಿಗೆ ಕಂಪನಿಯಿಂದ ಯಾವುದೇ ಹಣ ಬರದಿದ್ದಾಗ ತಾವು ವಂಚನೆಗೊಳಗಾಗಿರುವುದು ಅರಿವಾಗಿದೆ. ಬಳಿಕ ಅವರು ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.
ಮೈಸೂರಿನಲ್ಲಿ ಇದೇ ರೀತಿಯ ಐದು ಪ್ರತ್ಯೇಕ ಪ್ರಕರಣಗಳಲ್ಲಿ 5 ಮಂದಿ 20 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.