alex Certify ಪೊಲೀಸರ ಭರ್ಜರಿ ಬೇಟೆ: 85 ಗಂಟೆಯೊಳಗೆ ಗ್ಯಾಂಗ್ ರೇಪ್ ಕಾಮುಕರು ವಶಕ್ಕೆ, ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಭರ್ಜರಿ ಬೇಟೆ: 85 ಗಂಟೆಯೊಳಗೆ ಗ್ಯಾಂಗ್ ರೇಪ್ ಕಾಮುಕರು ವಶಕ್ಕೆ, ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದ ಪ್ರಕರಣ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಮಾಹಿತಿ ಆಧರಿಸಿ ವೈಜ್ಞಾನಿಕ ಸಾಕ್ಷಾಧಾರಗಳ ಮೇಲೆ ಹೊರ ರಾಜ್ಯದಲ್ಲಿದ್ದ 5 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆಗಸ್ಟ್ 24 ರಂದು ಸಂಜೆ ಸ್ನೇಹಿತನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿಗೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಕಾಮುಕರ ಅಟ್ಟಹಾಸ ಮೆರೆದು ಅತ್ಯಾಚಾರ ಎಸಗಿದ್ದರು.

ದೇಶದ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯ ಕೇಳಿಬಂದಿತ್ತು. ರಾಜ್ಯಾದ್ಯಂತ ಪ್ರತಿಭಟನೆ ಕೂಡ ನಡೆಸಲಾಗಿತ್ತು. ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಹೊರ ರಾಜ್ಯದಲ್ಲಿ ಇವತ್ತು ಬೆಳಗಿನ ಜಾವ 4 ಗಂಟೆಗೆ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರು ವಿದ್ಯಾರ್ಥಿಗಳಲ್ಲ ಎನ್ನಲಾಗಿದ್ದು, ಸಂಜೆಯೊಳಗೆ ಅಧಿಕೃತ ಮಾಹಿತಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...