ಮೈಸೂರು: ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಕಾಣಿಸಿಕೊಂಡ ಚಿರತೆ ಸೆರೆ ಸಿಗದ ಹಿನ್ನೆಲೆಯಲ್ಲಿ ಇನ್ಫೋಸಿಸ್ ಟ್ರೈನಿಗಳಿಗೆ ತರಬೇತಿ ಸ್ಥಗಿತಗೊಳಿಸಲಾಗಿದೆ. ಅರಣ್ಯ ಇಲಾಖೆ ವತಿಯಿಂದ ಚಿರತೆ ಸೆರೆಗಾಗಿ ಕಾರ್ಯಾಚರಣೆ ನಡೆಸಲಾಗಿದೆ.
ಕ್ಯಾಂಪಸ್ ನಲ್ಲಿ ಕಾಣಿಸಿಕೊಳ್ಳುತ್ತಿರುವ ಚಿರತೆ ಬೋನಿಗೆ ಬೀಳುತ್ತಿಲ್ಲ. ಕ್ಯಾಮರಾದ ಕಣ್ಣಿಗೆ ಚಿರತೆ ಕಾಣಿಸಿಕೊಳ್ಳುತ್ತಿದ್ದರೂ ಬೋನಿಗೆ ಬೀಳುತ್ತಿಲ್ಲ. ಹೀಗಾಗಿ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸ ನಡೆಸಿದ್ದಾರೆ. ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ಟ್ರೈನಿ ಸಿಬ್ಬಂದಿಗೆ ರಜೆ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಟ್ರೈನಿ ಉದ್ಯೋಗಿಗಳಿಗೆ ಜನವರಿ 26ರ ವರೆಗೆ ತರಬೇತಿಯಿಂದ ವಿನಾಯಿತಿ ನೀಡಲಾಗಿದೆ. 9 ದಿನಗಳಿಂದ ಇನ್ಫೋಸಿಸ್ ಆವರಣದಲ್ಲಿ ಕ್ಯಾಮರಾಕ್ಕೆ ಸರೆ ಸಿಕ್ಕ ಚಿರತೆ ಅರಣ್ಯ ಇಲಾಖೆ ಇಟ್ಟಿರುವ ಬೋನಿಗೆ ಬೀಳುತ್ತಿಲ್ಲ. ಹೀಗಾಗಿ ಟ್ರೈನಿಗಳಿಗೆ ತರಬೇತಿಯಿಂದ ವಿನಾಯಿತಿ ನೀಡಲಾಗಿದೆ.