
ಮೈಸೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಹಮ್ಮಿಕೊಂಡಿರುವ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ಇಂದು ಮೈಸೂರಿನಲ್ಲಿ ನಡೆಯಲಿದೆ.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಐತಿಹಾಸಿಕ ಸಮಾವೇಶ ನಡೆಯಲಿದ್ದು, 10 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಮೈಸೂರು ಹೊರವಲಯದ ಉತ್ತನಹಳ್ಳಿ ಸಮೀಪ ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಕಳೆದ ಆರೇಳು ತಿಂಗಳಿಂದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದ ಅವರು ಸಮಾವೇಶದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಪಷ್ಟ ಸಂದೇಶ ನೀಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.