ನಾಳೆ ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ರಾಜ್ಯ ಹೈಕೋರ್ಟ್ ತಡೆಯೊಡ್ಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಜೂನ್ 21ರವರೆಗೆ ಮೇಯರ್ ಚುನಾವಣೆ ನಡೆಸೋದು ಸರಿಯಲ್ಲ. ಜೂನ್ 21ರ ಬಳಿಕ ಪರಿಸ್ಥಿತಿಯನ್ನ ನೋಡಿಕೊಂಡು ದಿನಾಂಕ ನಿಗದಿ ಮಾಡಿ ಎಂದು ಹೈಕೋರ್ಟ್ ಆದೇಶ ನೀಡಿದೆ.
ಮೈಸೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಯಲ್ಲಿ ಈ ಸಂದರ್ಭದಲ್ಲಿ ಪಾಲಿಕೆ ಮೇಯರ್ ಚುನಾವಣೆ ಅವಶ್ಯಕತೆ ಇತ್ತೇ ಎಂದು ಪ್ರಶ್ನಿಸಿ ಪಾಲಿಕೆ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಪ್ರದೀಪ್ ಚಂದ್ರ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಈ ಮಧ್ಯಂತರ ಆದೇಶ ನೀಡಿದೆ.
ಅರ್ಜಿದಾರರ ಪರವಾಗಿ ವಾದ ಮಂಡಿಸಿದ ವಕೀಲ ಎಲ್. ಎಂ. ಚಿದಾನಂದಯ್ಯ ಮೈಸೂರಿನಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಚುನಾವಣೆ ನಡೆಸಿದರೆ ಜನರು ಒಂದೆಡೆ ಸೇರುವ ಸಾಧ್ಯತೆ ಹೆಚ್ಚಾಗುತ್ತದೆ. ಹೀಗಾಗಿ ಮೇಯರ್ ಚುನಾವಣೆ ಮುಂದೂಡುವಂತೆ ಹೈಕೋರ್ಟ್ ಬಳಿ ಕೇಳಿಕೊಂಡಿದ್ದರು. ವಾದ – ವಿವಾದಗಳನ್ನ ಆಲಿಸಿದ ರಾಜ್ಯ ಹೈಕೋರ್ಟ್ ಜೂನ್ 21ರವರೆಗೂ ಚುನಾವಣೆ ಬೇಡ ಎಂದು ಆದೇಶ ನೀಡಿದೆ.