
ಮೈಸೂರು: ಔಷಧ ಖರೀದಿಸಲು ಮೆಡಿಕಲ್ ಶಾಪ್ ಗೆ ಬಂದಿದ್ದ ವ್ಯಕ್ತಿಗೆ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ. ಮೈಸೂರಿನ ಉದಯಗಿರಿ ಮೆಡಿಕಲ್ ಸ್ಟೋರ್ ಬಳಿ 38 ವರ್ಷದ ಜಗದೀಶ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಅವರು ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಗದೀಶ್ ಮೆಡಿಕಲ್ ಸ್ಟೋರ್ ಗೆ ಬಂದಿದ್ದರು. ಈ ವೇಳೆಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ಕ್ಯಾತಮಾರನಹಳ್ಳಿಯಲ್ಲಿ ಜಗದೀಶ್ ಚಿಕನ್ ಅಂಗಡಿ ನಡೆಸುತ್ತಿದ್ದರು. ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.