
ಮೈಸೂರು: ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ರಾಜಸ್ಥಾನ ಮೂಲದ ಸುರೇಶ್(23) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಕಟ್ಟಿಗೆಯಿಂದ ಹೊಡೆದು ಅಂಗ್ರೇಜ್ ರಾಮ್ ಕೊಲೆ ಮಾಡಿದ್ದಾನೆ. ಖಾಸಗಿ ಫ್ಯಾಕ್ಟರಿಯಲ್ಲಿ ಯುವಕರು ಕೆಲಸ ಮಾಡುತ್ತಿದ್ದರು. ಆರೋಪಿ ಅಂಗ್ಏಜ್ ರಾಮ್ ನನ್ನು ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.