
ಮೈಸೂರು: ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ಯುವತಿ ತಾಯಿಯನ್ನು ಹತ್ಯೆ ಮಾಡಿದ್ದ ಆರೋಪಿ 24 ವರ್ಷದ ಮನೋಜ್ ಕುಮಾರ್ ನನ್ನು ಬಂಧಿಸಲಾಗಿದೆ ಮೈಸೂರು ಜಿಲ್ಲೆ ಟಿ. ನರಸೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 26 ರಂದು ನದಿಯಲ್ಲಿ ಭಾಗ್ಯಲಕ್ಷ್ಮಿ ಅವರ ಮೃತದೇಹ ಕಂಡುಬಂದಿದ್ದು, ಶವದ ಮೇಲೆ ಗಾಯದ ಗುರುತು ಕಂಡು ಬಂದ ಹಿನ್ನೆಲೆಯಲ್ಲಿ ಕೊಲೆ ಶಂಕೆ ವ್ಯಕ್ತವಾಗಿತ್ತು. ಭಾಗ್ಯಲಕ್ಷ್ಮಿ ಸಂಬಂಧಿಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.
ತನಿಖೆ ವೇಳೆ ಆರೋಪಿ ಮನೋಜ್ ಕುಮಾರ್ ಸಿಕ್ಕಿಬಿದ್ದಿದ್ದಾನೆ. ವಿಚಾರಣೆಯ ವೇಳೆ ಕೊಲೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಟಿ. ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.