
ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಡಪಳ್ಳಿಯಲ್ಲಿ ದಂಪತಿಯನ್ನು ಬರ್ಬರವಾಗಿ ಆಯ್ಕೆ ಮಾಡಲಾಗಿದೆ.
ರಂಗಸ್ವಾಮಿಗೌಡ(65), ಪತ್ನಿ ಶಾಂತಮ್ಮ(55) ಅವರನ್ನು ಕಗ್ಗೊಲೆ ಮಾಡಲಾಗಿದೆ. ತೋಟದ ಮನೆಯಲ್ಲಿ ಒಳಕಲ್ಲಿನಿಂದ ಜಜ್ಜಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹಾಡಹಗಲೇ ನಡೆದ ಕೃತ್ಯಕ್ಕೆ ಜನ ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.