
ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ.
ಮಹೇಶ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಳೆಯೂರು ಗ್ರಾಮದ ಗಿರೀಶ್ ಎಂಬುವನು ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಸಣ್ಣಪುಟ್ಟ ವಿಚಾರಕ್ಕೆ ಮಹೇಶ್ ಮತ್ತು ಗಿರೀಶ್ ನಡುವೆ ಗಲಾಟೆ ನಡೆಯುತ್ತಿತ್ತು. ಗಲಾಟೆ ವೇಳೆ ಗಿರೀಶ್ ಮಚ್ಚಿನಿಂದ ಮಹೇಶನ ತಲೆಗೆ ಹೊಡೆದಿದ್ದಾನೆ. ಗಾಯಾಳು ಮಹೇಶನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಹುಲ್ಲಾಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.