ಮೈಸೂರು: ಮೈಸೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ರಿಯಲ್ ಎಸ್ಟೇಟ್ ಉದ್ಯಮಿ, ಅಗರಬತ್ತಿ ವ್ಯಾಪಾರಿಯನ್ನು ಹತ್ಯೆ ಮಾಡಿದ್ದಾರೆ.
ಮನೆಗೆ ನುಗ್ಗಿ ಮಗನ ಮುಂದೆಯೇ ವ್ಯಾಪಾರಿಯ ಹತ್ಯೆ ಮಾಡಲಾಗಿದೆ. ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ಘಟನೆ ನಡೆದಿದೆ. ರಾಡ್ ನಿಂದ ಹೊಡೆದು 60 ವರ್ಷದ ಸಂಪತ್ ಕುಮಾರ್ ಅವರನ್ನು ಹತ್ಯೆ ಮಾಡಲಾಗಿದೆ. ವಿವಿ ಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.