ಮೈಸೂರು: ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ಅಣ್ಣ, ಅತ್ತಿಗೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಪತಿ ಶಿವಲಿಂಗೇಗೌಡ(55), ಪತ್ನಿ ಭಾರತಿ(47) ಅವರನ್ನು ಕೊಲೆ ಮಾಡಲಾಗಿದೆ. ಶಿವಲಿಂಗೇಗೌಡರ ಸಹೋದರ ಹನುಮಂತೇಗೌಡ(50) ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ.
ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಶಿವಲಿಂಗೇಗೌಡ ಮತ್ತು ಭಾರತಿ ಅವರ ಮೇಲೆ ಮಚ್ಚಿನಿಂದ ದಾಳಿ ಮಾಡಿ ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.