alex Certify ಪ್ರವಾಸಿಗರಿಗೆ ಶಾಕ್: ಅರಮನೆ ಪ್ರವೇಶ ಶುಲ್ಕ 100 ರೂ.ಗೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರಿಗೆ ಶಾಕ್: ಅರಮನೆ ಪ್ರವೇಶ ಶುಲ್ಕ 100 ರೂ.ಗೆ ಹೆಚ್ಚಳ

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಪ್ರವೇಶ ಶುಲ್ಕವನ್ನು 70 ರೂಪಾಯಿಂದ 100 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

4 ವರ್ಷದ ನಂತರ ಪ್ರವೇಶ ದರ ಹೆಚ್ಚಳ ಮಾಡಲಾಗಿದ್ದು, ಶನಿವಾರದಿಂದಲೇ ಜಾರಿಗೆ ಬಂದಿದೆ. ಹಿಂದೆ ವಯಸ್ಕರಿಗೆ 70 ರೂ. ಪ್ರವೇಶ ಶುಲ್ಕವಿದ್ದು, ಅದನ್ನು 100 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಮಕ್ಕಳಿಗೆ 30 ರೂಪಾಯಿ ಪ್ರವೇಶ ಶುಲ್ಕವಿದ್ದು, ಅದನ್ನು 50 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಶಾಲೆಗಳಿಂದ ಶಿಕ್ಷಕರೊಂದಿಗೆ ಬರುವ ಮಕ್ಕಳಿಗೆ 30 ರೂಪಾಯಿ ನಿಗದಿ ಮಾಡಲಾಗಿದೆ.

ಕೊರೋನಾ ಕಾರಣದಿಂದಾಗಿ ಭಾರಿ ನಷ್ಟ ಉಂಟಾಗಿದ್ದು, ಅರಮನೆಗೆ ಭೇಟಿ ನೀಡುವವರ ಸಂಖ್ಯೆ ಕೂಡ ಕಡಿಮೆಯಾಗಿದೆ. ಹೀಗಾಗಿ ಮೈಸೂರು ಅರಮನೆ ಮಂಡಳಿ ಪ್ರವೇಶ ದರ ಪರಿಷ್ಕರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...