alex Certify BREAKING: ಪ್ರವಾಸಿಗರಿಗೆ ಶಾಕ್: ನಾಳೆಯಿಂದ ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪ್ರವಾಸಿಗರಿಗೆ ಶಾಕ್: ನಾಳೆಯಿಂದ ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ

ಮೈಸೂರು: ನಾಳೆಯಿಂದ ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ ಮಾಡಲಾಗಿದೆ. ಅರಮನೆ ಮಂಡಳಿ ಪರಿಷ್ಕೃತ ಶುಲ್ಕ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ವಿದೇಶಿ ಪ್ರವಾಸಿಗರಿಗೆ 1000 ರೂ. ಪ್ರವೇಶ ದರ ನಿಗದಿಪಡಿಸಲಾಗಿದೆ. ವಿದೇಶಿ ಪ್ರವಾಸಿಗರಿಗೆ ಪ್ರವೇಶ ಶುಲ್ಕವನ್ನು 900 ರೂ. ಹೆಚ್ಚಳ ಮಾಡಲಾಗಿದೆ. ಈ ಹಿಂದೆ ವಿದೇಶಿಯರಿಗೆ 100 ರೂಪಾಯಿ ಪ್ರವೇಶ ಶುಲ್ಕವಿತ್ತು.

ಭಾರತೀಯ ವಯಸ್ಕರಿಗೆ ಪ್ರವೇಶ ದರ 20 ರೂಪಾಯಿ ಹೆಚ್ಚಳ ಮಾಡಿದ್ದು, 120 ರೂ. ಶುಲ್ಕ ನಿಗದಿ ಮಾಡಲಾಗಿದೆ.

10ರಿಂದ 18 ವರ್ಷದೊಳಗಿನ ಮಕ್ಕಳಿಗೆ 70 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.

ಪ್ರವಾಸಕ್ಕೆ ಬರುವ ವಿದ್ಯಾರ್ಥಿಗಳಿಗೆ ತಲಾ 50 ರೂ. ಪ್ರವೇಶ ದರ ನಿಗದಿಪಡಿಸಲಾಗಿದೆ.

ಮೈಸೂರು ಅರಮನೆ ಮಂಡಳಿಯಿಂದ ಈ ಬಗ್ಗೆ ಆದೇಶ ಹೊರಡಿಸಲಾಗಿದೆ.

ಒಳ ಆವರಣದಲ್ಲಿ ಚಪ್ಪಲಿ ಸ್ಟ್ಯಾಂಡ್, ಲಗೇಜ್ ಕೊಠಡಿ, ಶೌಚಾಲಯ ಶುಲ್ಕವನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...