ಮೈಸೂರು: ಜೂನ್ 21 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.
ಮೈಸೂರು ಸಂಸದ ಪ್ರತಾಪಸಿಂಹ ಈ ಬಗ್ಗೆ ಪ್ರಧಾನಿಯವರಿಗೆ ಮನವಿ ಮಾಡಿದ್ದು, ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೋದಿ ಸಮ್ಮತಿಸಿದ್ದಾರೆ ಎನ್ನಲಾಗಿದೆ.
ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ವಿಶ್ವಸಂಸ್ಥೆಯ ನಿರ್ಣಯವನ್ನು ಅಂಗೀಕರಿಸುವಂತೆ ಮಾಡುವುದು ಸೇರಿದಂತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗವನ್ನು ಜನಪ್ರಿಯಗೊಳಿಸಲು ಮೋದಿಯವರ ಕೊಡುಗೆ ಮಹತ್ವದ್ದಾಗಿದೆ. ಪ್ರಪಂಚದಾದ್ಯಂತ 190 ಕ್ಕೂ ಹೆಚ್ಚು ದೇಶಗಳು ಪ್ರತಿ ವರ್ಷ ಜೂನ್ 21 ರಂದು ಯೋಗ ದಿನಾಚರಣೆ ಆಚರಿಸುತ್ತವೆ.