ಮೈಸೂರು: ಬ್ಯೂಟಿ ಪಾರ್ಲರ್ ಹೆಸರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ಐದು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಲಲಿತ ಮಹಲ್ ನಗರದ ಮುಖ್ಯರಸ್ತೆಯ ಬ್ಯೂಟಿ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಮಾಹಿತಿ ಪಡೆದ ವಿಶೇಷ ಪೊಲೀಸರ ತಂಡ ದಾಳಿ ಮಾಡಿದೆ. ಪಾರ್ಲರ್ ನಲ್ಲಿ ಐದು ಯುವತಿಯರು, ಇಬ್ಬರು ಯುವಕರು ಪತ್ತೆಯಾಗಿದ್ದಾರೆ.
ನಿವೃತ್ತ ಪೊಲೀಸ್ ಅಧಿಕಾರಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಲಲಿತ ಮಹಲ್ ನಗರದ ಮುಖ್ಯ ರಸ್ತೆಯಲ್ಲಿರುವ ಕಟ್ಟಡದಲ್ಲಿ ಫ್ಯಾಮಿಲಿ ಸಲೂನ್ ಹೆಸರಲ್ಲಿ ಮಹೇಶ್ ಎಂಬಾತ ವೇಶ್ಯಾವಾಟಿಕೆ ನಡೆಸುತ್ತಿದ್ದ. ಒಡನಾಡಿ ಮತ್ತು ಪೊಲೀಸ್ ಆಯುಕ್ತರ ವಿಶೇಷ ದಳದಿಂದ ಕಾರ್ಯಾಚರಣೆ ನಡೆಸಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.