
ಬೆಂಗಳೂರು: ಮೈಸೂರಿನ ಉದಯಗಿರಿ ಪೋಲಿಸ್ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 24 ರಂದು ಮೈಸೂರಿನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನೆಯಲ್ಲಿ ಬಿಜೆಪಿಯ ರೆಬೆಲ್ ನಾಯಕರು ಭಾಗವಹಿಸಲಿದ್ದಾರೆ.
ರಾಜ್ಯ ಬಿಜೆಪಿಯ ರೆಬೆಲ್ ನಾಯಕರ ಸಭೆಯಲ್ಲಿ ಮೈಸೂರು ಪ್ರತಿಭಟನೆಯಲ್ಲಿ ಭಾಗವಹಿಸಲು ತೀರ್ಮಾನಿಸಲಾಗಿದೆ. ಬಿಜೆಪಿ ವತಿಯಿಂದ ನಡೆಯುವ ಹೋರಾಟದಲ್ಲಿ ರೆಬೆಲ್ ನಾಯಕರು ಭಾಗವಹಿಸಲಿದ್ದಾರೆ. ಬಸನಗೌಡ ಪಾಟೀಲ, ರಮೇಶ ಜಾರಕಿಹೊಳಿ, ಪ್ರತಾಪ ಸಿಂಹ, ಅರವಿಂದ ಲಿಂಬಾವಳಿ, ಜಿ.ಎಂ. ಸಿದ್ಧೇಶ್ವರ್, ಕುಮಾರ್ ಬಂಗಾರಪ್ಪ ಸೇರಿದಂತೆ ರೆಬಲ್ಸ್ ನಾಯಕರು ಭಾಗವಹಿಸಲಿದ್ದಾರೆ.