
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲವು ದಿನಗಳಿಂದ ರಾಜ್ಯದ ಅನೇಕ ಭಾಗದಲ್ಲಿ ಆಗಾಗ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಹಳೆ ಮೈಸೂರು ಭಾಗದಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕದ ಹಲವು ಭಾಗದಲ್ಲಿ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಹಾಸನ, ಮೈಸೂರು, ರಾಮನಗರ, ಚಾಮರಾಜನಗರ, ಮಂಡ್ಯ ಮೊದಲಾದ ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ.