alex Certify ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಲವು ದಿನಗಳಿಂದ ರಾಜ್ಯದ ಅನೇಕ ಭಾಗದಲ್ಲಿ ಆಗಾಗ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಹಳೆ ಮೈಸೂರು ಭಾಗದಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕದ ಹಲವು ಭಾಗದಲ್ಲಿ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಹಾಸನ, ಮೈಸೂರು, ರಾಮನಗರ, ಚಾಮರಾಜನಗರ, ಮಂಡ್ಯ ಮೊದಲಾದ ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...