
ಮೈಸೂರು: ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವೇಶ್ವರಯ್ಯ ನಗರದ ಅಪಾರ್ಟ್ ಮೆಂಟ್ ನಲ್ಲಿ ಘಟನೆ ನಡೆದಿದೆ.
ಚೇತನ್, ರೂಪಾಲಿ ದಂಪತಿ, ವೃದ್ಧೆ ಮತ್ತು ಮಗು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರಿಗೆ ವಿಷ ನೀಡಿ ಬಳಿಕ ಚೇತನ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಶವ ಪತ್ತೆಯಾಗಿದೆ.
ಕುಶಾಲ್(15), ಚೇತನ್(45), ರೂಪಾಲಿ(43), ಪ್ರಿಯಂವಧಾ(62) ಮೃತಪಟ್ಟವರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿದ್ದಾರೆ. ನಾಲ್ವರು ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.