
ಮೈಸೂರು: ಬೆಂಕಿ ಹಚ್ಚಿಕೊಂಡು ಮಗು ಸಮೇತ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ.
8 ತಿಂಗಳ ಮಗುವಿಗೆ ಪಂಚಾಯಿತಿ ತಾಯಿ ಸಿಂಧು(24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಿನ್ನತೆಗೆ ಒಳಗಾಗಿದ್ದ ಅವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಚಾಮರಾಜನಗರ ಮೂಲದ ಸಿಂಧು ದಾಸನೂರಿನ ಮಹದೇವಸ್ವಾಮಿ ಜೊತೆಗೆ 9 ವರ್ಷಗಳ ಹಿಂದೆ ಮದುವೆಯಾಗಿದ್ದು, ನಾಲ್ಕು ಬಾರಿ ಗರ್ಭಪಾತವಾದ ನಂತರ ಗಂಡು ಮಗುವಿಗೆ ಜನ್ಮ ನೀಡಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ ನಂತರ ಅವರು ಖಿನ್ನತೆಗೆ ಒಳಗಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ತಾಯಿ, ಮಗುವನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ 8 ತಿಂಗಳ ಮಗು ಮತ್ತು ತಾಯಿ ಸಿಂಧು ಮೃತಪಟ್ಟಿದ್ದಾರೆ. ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.