ಮೈಸೂರು: ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ.
ಎನ್. ಬೇಗೂರು ಸಮೀಪದ ಮಾಡದಹಾಡಿ ನಿವಾಸಿ 48 ವರ್ಷದ ಚಿಕ್ಕಿ ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಚಿಕ್ಕಿ ಅವರು ಮೇಕೆ ಮೇಯಿಸಲು ಹೋಗಿದ್ದ ವೇಳೆ ಹುಲಿ ದಾಳಿ ನಡೆಸಿದೆ. ಸ್ಥಳಕ್ಕೆ ಎನ್. ಬೇಗೂರು ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳದಲ್ಲಿ ಮಹಿಳೆಯ ಕಾಲು ಮಾತ್ರ ಸಿಕ್ಕಿರುವ ಮಾಹಿತಿ ಗೊತ್ತಾಗಿದೆ. ಮಹಿಳೆಯ ಮೃತದೇಹಕ್ಕಾಗಿ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.