alex Certify BREAKING NEWS: ಮೈಸೂರಲ್ಲಿ ಮತ್ತೆ ಕಾಮುಕರ ಅಟ್ಟಹಾಸ, ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮೈಸೂರಲ್ಲಿ ಮತ್ತೆ ಕಾಮುಕರ ಅಟ್ಟಹಾಸ, ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ…?

ಮೈಸೂರಿನಲ್ಲಿ ಮತ್ತೆ ಕಾಮುಕರು ಅಟ್ಟಹಾಸ ಮೆರೆದಿದ್ದು, ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆ ಮಾಡಿದ ಘಟನೆ ಸ್ಟಡಿಹೌಸ್ ಬಳಿ ನಡೆದಿದೆ. ಸಂತ್ರಸ್ತ ಯುವತಿಯನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಟಡಿ ಹೌಸ್ ಒಳಗೆ ಪ್ರವೇಶಿಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಹಲ್ಲೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸ್ಟಡಿ ಹೌಸ್ ನಲ್ಲಿ ಆಂಧ್ರಪ್ರದೇಶದ 7 ಮಂದಿ ವಿದ್ಯಾರ್ಥಿನಿಯರು ಇದ್ದರು. ಘಟನೆ ನಡೆದ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ತರಗತಿಗೆ ಹೋಗಿದ್ದರು. ವಿದ್ಯಾರ್ಥಿನಿ ಒಬ್ಬಳೇ ಇರುವುದನ್ನು ಗಮನಿಸಿ ಅತ್ಯಾಚಾರಕ್ಕೆ ಯತ್ನಿಸಿ ಚಾಕುವಿನಿಂದ ಕೈಗೆ ಇರಿದು ಪರಾರಿಯಾಗಿದ್ದಾರೆನ್ನಲಾಗಿದ್ದು, ಗಾಯಾಳು ವಿದ್ಯಾರ್ಥಿನಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನರಸಿಂಹರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಮೈಸೂರು ಪೊಲೀಸ್ ಆಯುಕ್ತರೊಂದಿಗೆ ಚರ್ಚೆ ನಡೆಸಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...